ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಸರ್ಕಾರಿ ಶಾಲಾ ಶಿಕ್ಷಕರ ನೇಮಕಕ್ಕೆ ಶೈಕ್ಷಣಿಕ ಜಿಲ್ಲಾವಾರು ಅಧಿಸೂಚನೆ ಹೊರಡಿಸಿದ್ದು, ಧಾರವಾಡ ಶೈಕ್ಷಣಿಕ ಜಿಲ್ಲೆಗೆ ಸಂಬಂಧಿಸಿದಂತೆ ತಿದ್ದುಪಡಿ ಅಧಿಸೂಚನೆ ಪ್ರಕಟಿಸಲಾಗಿದೆ. ತಾಂತ್ರಿಕ ಕಾರಣಗಳಿಂದ ಧಾರವಾಡ ಜಿಲ್ಲೆಗೆ ಸಂಬಂಧಿಸಿದ ಅಧಿಸೂಚನೆಯಲ್ಲಿ ಹಾವೇರಿ ಜಿಲ್ಲೆಯ ಪೂರ್ಣ ಅಧಿಸೂಚನೆ ನಮೂದಾಗಿದ್ದರಿಂದ ಧಾರವಾಡ ಜಿಲ್ಲೆಯ ಅಧಿಸೂಚನೆಯನ್ನು ಸರಿಪಡಿಸಿ, ತಿದ್ದುಪಡಿ ಅಧಿಸೂಚನೆ ಪ್ರಕಟಿಸಲಾಗಿದೆ. ತಿದ್ದುಪಡಿ ಅಧಿಸೂಚನೆಯನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ವೆಬ್ ಸೈಟ್ ಲಿಂಕ್: schooleducation.karnataka.gov.in/cacell
5August 25, 2026 6.2K 6